
ಕೇರಳ: ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಗೆ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಕೇರಳದಲ್ಲಿ ನಡೆದಿದೆ.
ಆತನ ಅಸಭ್ಯ ವರ್ತನೆಯನ್ನು ವಿಡಿಯೋ ಮಾಡಿದ್ದು, ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ಆ ವ್ಯಕ್ತಿಯು ಆಕೆಯ ಖಾಸಗಿ ಭಾಗವನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಲು ಮುಂದಾದಾಗ ಆತನನ್ನು ತಡೆದು ಆತನ ಕೆನ್ನೆಗೆ ಕೈ ರುಚಿ ತೋರಿಸಿದ್ದಾಳೆ ಈ ವೇಳೆ ಬಸ್ ಕಂಡಕ್ಟರ್ ಸ್ಥಳಕ್ಕೆ ಬಂದು ವ್ಯಕ್ತಿಯನ್ನು ಪ್ರಶ್ನೆ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು,
ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬಹಳಷ್ಟು ವೈರಲ್ ಆಗಿದ್ದು, ಬಳಕೆದಾರರು ಆಕೆಯ ದಿಟ್ಟತನಕ್ಕೆ ಭೇಷ್ ಅಂದಿದ್ದಾರೆ. ಜೊತೆಗೆ ಇಷ್ಟೆಲ್ಲಾ ಆದರೂ ಏನೂ ಪ್ರತಿಕ್ರಿಯಿಸದೆ ಕುಳಿತಿದ್ದ ಪ್ರಯಾಣಿಕರ ಮೇಲೆ ತಮ್ಮ ಅಸಹನೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಆ ವ್ಯಕ್ತಿಗೆ ಇನ್ನೂ ಹೆಚ್ಚು ಪೆಟ್ಟು ಕೊಡಬೇಕಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.